Bhakthi Geethegallu

================ದಿವ್ಯಮತಿ ಸರಸ್ವತಿ=============================

ರಚನೆ : ಪುರಂದರ ದಾಸರು
ರಾಗ: ವಸಂತ
ತಾಳ : ಆದಿ
ಭಾಷೆ : ಕನ್ನಡ

ಪಲ್ಲವಿ
ಕೊಡು ಬೇಗ ದಿವ್ಯಮತಿ ಸರಸ್ವತಿ ||

ಅನುಪಲ್ಲವಿ
ಮೃಡ ಹರಿಹರ ಮುಖರೊಡೆಯಳೆ ನಿನ್ನಯ
ಅಡಿಗೆರಗುವೆ ಅಮ್ಮ ಬ್ರಹ್ಮನ ರಾಣಿ||

ಚರಣ
ಇಂದಿರಾ ರಮಣನ ಹಿರಿಯ ಸೋಸಯು ನಿನು
ಬಂದೆನ್ನ ವದನದಿ ನಿಂದು ನಾಮವ ನುಡಿಸೆ||1||

ಅಖಿಲ ವಿದ್ಯಾಭಿಮಾನಿ ಅಜನ ಪಟ್ಟದರಾಣಿ
ಸುಖವಿತ್ತು ಪಾಲಿಸೆ ಸುಜನ ಶಿರೋಮಣಿ||2||

ಪತಿತ ಪಾವನೆ ನೀ ಗತಿಯೆಂದು ನಂಬಿದೆ
ಸತತ ಪುರಂದರ ವಿಠಲನ ತೋರೆ||3||

================ಪವಮಾನ ಪವಮಾನ=============================

ಪವಮಾನ ಪವಮಾನ ಜಗದಾ ಪ್ರಾಣಾ
ಸಂಕರುಷಣ ಭವಭಯಾರಣ್ಯ ದಹನ |ಪ|

ಶ್ರವಣವೆ ಮೊದಲಾದ ನವವಿಧ ಭಕುತಿಯ
ತವಕದಿಂದಲಿ ಕೊಡು ಕವಿಗಳ ಪ್ರಿಯ ||

ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ
ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ ರಾಮಚಂದ್ರನ ನಿಜದೂತ
ಯಾಮ ಯಾಮಕೆ ನಿನ್ನಾರಾಧಿಪುದಕೆ
ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ
ಈ ಮನಸಿಗೆ ಸುಖಸ್ತೋಮವ ತೋರುತ
ಪಾಮರ ಮತಿಯನು ನೀ ಮಾಣಿಪುದು |1|

ವಜ್ರ ಶರೀರ ಗಂಭೀರ ಮುಕುಟಧರ ದುರ್ಜನವನ ಕುಠಾರ
ನಿರ್ಜರ ಮಣಿದಯಾ ಪಾರ ವಾರ ಉದಾರ ಸಜ್ಜನರಘವ ಪರಿಹಾರ
ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು
ಮೂರ್ಜಗವರಿವಂತೆ ಗರ್ಜನೆ ಮಾಡಿದಿ
ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜ ಪಾದದ ಧೂಳಿ
ಮಾರ್ಜನದಲಿ ಭವ ವರ್ಜಿತನೆನಿಸೊ |2|

ಪ್ರಾಣ ಅಪಾನ ವ್ಯಾನೋದಾನ ಸಮಾನ ಆನಂದ ಭಾರತಿ ರಮಣ
ನೀನೆ ಶರ್ವಾದಿ ಗೀರ್ವಾಣಾದ್ಯಮರರಿಗೆ ಜ್ಞಾನಧನ ಪಾಲಿಪ ವರೇಣ್ಯ
ನಾನು ನಿರುತದಲಿ ಏನೇನೆಸಗಿದೆ
ಮಾನಸಾದಿ ಕರ್ಮ ನಿನಗೊಪ್ಪಿಸಿದೆನೊ
ಪ್ರಾಣನಾಥ ಸಿರಿವಿಜಯವಿಠಲನ
ಕಾಣಿಸಿ ಕೊಡುವದು ಭಾನು ಪ್ರಕಾಶ |3|

================ಅಂಬಿಗ ನಾ ನಿನ್ನ ನಂಬಿದೆ=============================

ಪಲ್ಲವಿ
ಅಂಬಿಗ ನಾ ನಿನ್ನ ನಂಬಿದೆ ಜಗದಂಬಾರಮಣನ ನಿನ್ನ ನಂಬಿದೆ||

ಚರಣ

ತುಂಬಿದ ಹರಿಗೋಲಂಬಿಗ
ಅದಕೊಂಭತ್ತು ಛಿದ್ರವು ಅಂಬಿಗ
ಸಂಭ್ರಮದಿಂ ನೋಡಂಬಿಗ
ಅದರಿಂಬು ನೋಡಿ ನಡೆಸಂಬಿಗ||1||

ಹೊಳೆಯ ಭರವ ನೋಡಂಬಿಗ
ಅದಕೆ ಸೆಳವು ಘನವಯ್ಯ ಅಂಬಿಗ
ಸುಳಿಯೊಳು ಮುಳುಗಿದೆ ಅಂಬಿಗ
ಎನ್ನ ಸೆಳೆದು ಕೊಂಡೊಯ್ಯೊ ನೀನಂಬಿಗ||2||

ಆರು ತೆರೆಯ ನೋಡಂಬಿಗ
ಅದು ಮೀರಿ ಬರುತಲಿದೆ ಅಂಬಿಗ
ಯಾರಿಂದಲಾಗದು ಅಂಬಿಗ
ಅದ ನಿವಾರಿಸಿ ದಾಟಿಸೋ ಅಂಬಿಗ||3||

ಸತ್ಯವೆಂಬುದೆ ಹುಟ್ಟು ಅಂಬಿಗ
ಸದಾ ಭಕ್ತಿಯೆಂಬುದೆ ಪಥ ಅಂಬಿಗ
ನಿತ್ಯ ಮೂರುತಿ ಪುರಂದರ ವಿಟ್ಠಲ
ನಮ್ಮ ಮುಕ್ತಿ ಮಂಟಪಕೊಯ್ಯೊ ಅಂಬಿಗ||4||

OR
ಸತ್ವ ಪಥದೊಳಗೆ ಅಂಬಿಗ
ಪರಾ ಭಕ್ತಿ ಹುಟ್ಟನು ಹಾಕಿ ಅಂಬಿಗ
ಮುಕ್ತಿದಾಯಕ ನಮ್ಮ ಪುರಂದರ ವಿಟ್ಠಲನ
ಮುಕ್ತಿ ಮಂಟಪಕೊಯ್ಯೋ ಅಂಬಿಗ||4||

By, ಪುರಂದರ Daasa

==========================================================

Advertisements
This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s